ಬಂಟ್ವಾಳ, ನವೆಂಬರ್ 02, 2023 (ಕರಾವಳಿ ಟೈಮ್ಸ್) : ಸ್ಕೂಟರ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ಸಂಭವಿಸಿದೆ.
ಗಾಯಗೊಂಡ ಪಾದಚಾರಿ ವ್ಯಕ್ತಿಯನ್ನು ವಸಂತ ಕುಲಾಲ್ ಎಂದು ಹೆಸರಿಸಲಾಗಿದೆ. ಇವರು ಫರಂಗಿಪೇಟೆ ಬಸ್ ತಂಗುದಾಣದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಸುನೀಲ್ ಎಂಬವರು ಚಲಾಯಿಸಿಕೊಂಡು ಬಂದ ಸ್ಕೂಟರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟ ವಸಂತ ಅವರನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದ್ದಾರೆ.
ಸ್ಕೂಟರ್ ಸವಾರ ಸುನಿಲ್ ಅವರ ದುಡುಕುತನ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಕೊಡ್ಮಣ್ ನಿವಾಸಿ ಪ್ರದೀಪ್ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment