ಕಕ್ಕಿಂಜೆ : ಮನೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರು ಕಳವು, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಕಕ್ಕಿಂಜೆ : ಮನೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರು ಕಳವು, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

20 November 2023

ಕಕ್ಕಿಂಜೆ : ಮನೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರು ಕಳವು, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ, ನವೆಂಬರ್ 21, 2023 (ಕರಾವಳಿ ಟೈಮ್ಸ್) : ಮನೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರು ಕಳವಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಉಳ್ಳಾಲ ನಿವಾಸಿ ಇಸಾಕ್ ಎಂಬವರಿಗೆ ಸೇರಿದ ಇನ್ನೋವಾ ಕಾರನ್ನು ಅವರ ಸಂಬಂಧಿ ನೌಫಲ್ ಎಂಬವರು ನ 9 ರಂದು ರಾತ್ರಿ ಕಕ್ಕಿಂಜೆ ಮನೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದು ನ 10 ರಂದು ಬೆಳಿಗ್ಗೆ ನೋಡಿದ ಕಾರು ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾಗಿರುವ ಕಾರಿನ ಮೌಲ್ಯ 2.25 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದ್ದು, ಆಸುಪಾಸಿನಲ್ಲಿ ಹುಡುಕಾಡಿದರೂ ಕಾರು ಪತ್ತೆಯಾಗದ ಕಾರಣ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕಕ್ಕಿಂಜೆ : ಮನೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರು ಕಳವು, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top