ಬಂಟ್ವಾಳ, ನವೆಂಬರ್ 30, 2023 (ಕರಾವಳಿ ಟೈಮ್ಸ್) : ಟೆಂಪೋ ಡಿಕ್ಕಿ ಹೊಡೆದು ಬೈಕ್ ಸವಾರ ಹಾಗೂ ಸಹ ಸವಾರಿಣಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಗಾಯಗೊಂಡ ಬೈಕ್ ಸವಾರನನ್ನು ದಿವಾಕರ ಹಾಗೂ ಸಹಸವಾರಿಣಿ ಮೋಹಿನಿ ಎಂದು ಹೆಸರಿಸಲಾಗಿದೆ. ಆಕಾಶ್ ಎಂಬವರು ಚಲಾಯಿಸುತ್ತಿದ್ದ ಬಾಟಲಿ ನೀರು ಸರಬರಾಜು ಮಾಡುತ್ತಿದ್ದ ಅಶೋಕ್ ಲೈಲ್ಯಾಂಡ್ ಟೆಂಪೋ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ರಸ್ತೆ ಗುಂಡಿ ತಪ್ಪಿಸುವ ಭರದಲ್ಲಿ ಬೈಕಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಬೈಕ್ ಸವಾರರು ಬೈಕ್ ಸಮೇತವಾಗಿ ರಸ್ತೆಗೆ ಬಿದ್ದು ಗಾಯಗೊಂಡವರನ್ನು ಟೆಂಪೊ ಚಾಲಕ ಆಕಾಶ್ ಅವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment