ಪುತ್ತೂರು, ನವೆಂಬರ್ 10, 2023 (ಕರಾವಳಿ ಟೈಮ್ಸ್) : ಇಲ್ಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ರಂಪಾಡಿ ಎಂಬಲ್ಲಿ ಯುವಕರು ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಇಬ್ಬರು ಅಪ್ರಾಪ್ತರ ಸಹಿತ ಒಟ್ಟು 9 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶುಕ್ರವಾರ (ನ 10) ಮಧ್ಯಾಹ್ನದ ವೇಳೆ ಮುಕ್ರಂಪಾಡಿ ಎಂಬಲ್ಲಿ ಕೆಲ ಯುವಕರು ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿ ಆತಂಕದ ಪರಿಸ್ಥಿತಿ ನಿರ್ಮಿಸಿದ್ದರು. ಈ ಬಗ್ಗೆ ಮಿಂಚಿನ ಕಾರ್ಯಾಚರಣೆ ನಡೆಸಿರುವ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ನಿವಾಸಿ ದಿನೇಶ ಪಂಜಿಗ (38), ನರಿಮೊಗರು ಗ್ರಾಮದ ಭವಿತ್ (19), ಬೊಳ್ವಾರು ನಿವಾಸಿ ಮನ್ವಿತ್ (19), ಆರ್ಯಾಪು ಗ್ರಾಮದ ಜಯಪ್ರಕಾಶ (18), ಚಿಕ್ಕಮುಡ್ನೂರು ಗ್ರಾಮದ ಚರಣ್ (23), ಬನ್ನೂರು ಗ್ರಾಮದ ಮನೀಶ (23), ಪುತ್ತೂರು ಕಸಬಾ ಗ್ರಾಮದ ವಿನೀತ್ (19) ಹಾಗೂ ಇಬ್ಬರು ಅಪ್ರಾಪ್ತ ಪ್ರಾಯದ ಬಾಲಕರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳ ವಿರುದ್ದ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 108/2023 ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಹಾಗೂ ಸುಳ್ಳು ವದಂತಿಗಳನ್ನು ಪ್ರಸಾರ ಮಾಡದಂತೆ ಪೊಲೀಸರು ಮನವಿ ಮಾಡಿದ್ದಾರೆ.
0 comments:
Post a Comment