ಪುತ್ತೂರು, ನವೆಂಬರ್ 29, 2023 (ಕರಾವಳಿ ಟೈಮ್ಸ್) : ಪುತ್ತೂರು ಬಸ್ ನಿಲ್ದಾಣದಲ್ಲಿದ್ದ ವೇಳೆ ಅಪರಿಚಿತ ವ್ಯಕ್ತಿ ಮದ್ಯ ಸೇವಿಸಲು ನೀಡಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಪುತ್ತೂರು ನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕು, ಮೂಲತಃ ಆರ್ಯಾಪು ಗ್ರಾಮದ ನಿವಾಸಿ, ಸದ್ಯ ಬನ್ನೂರು ಗ್ರಾಮದಲ್ಲಿ ವಾಸ್ತವ್ಯ ಇರುವ ಸಂಶುದ್ದೀನ್ ಅಸ್ಗರ್ ಅಲಿ (23) ಎಂದು ಹೆಸರಿಸಲಾಗಿದೆ.
ಹಾಸನ ತಾಲೂಕು ಚೆನ್ನರಾಯಪಟ್ಟಣ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆ ನ 24 ರಂದು ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿದ್ದ ವೇಳೆ ಅಪರಿಚಿತ ವ್ಯಕ್ತಿಯೋರ್ವ ಮಹಿಳೆಗೆ ಮದ್ಯ ಸೇವಿಸಲು ನೀಡಿ ಬಳಿಕ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ ಎಂದು ಪುತ್ತೂರು ನಗರ ಠಾಣೆಯಲ್ಲಿ ನ 25 ರಂದು ಅಪರಾಧ ಕ್ರಮಾಂಕ 114/2023 ಕಲಂ 376 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿ ಸಂಶುದ್ದೀನ್ ಅಸ್ಗರ್ ಅಲಿಯನ್ನು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ಸು ನಿಲ್ದಾಣದ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
0 comments:
Post a Comment