ಬಂಟ್ವಾಳ, ನವೆಂಬರ್ 18, 2023 (ಕರಾವಳಿ ಟೈಮ್ಸ್) : ಬಂಟ್ವಾಳ ದರ್ಬೆ ಯಕ್ಷಕಾವ್ಯ ತರಂಗಿಣಿ ಮತ್ತು ನೇರಂಬೋಳು ಶ್ರೀ ರಕ್ತೇಶ್ವರಿ ಯುವಕ ಸಂಘ ಇದರ ಜಂಟಿ ಆಶ್ರಯದಲ್ಲಿ ಯಕ್ಷಗಾನ ಕಲಿಕಾ ವಿದ್ಯಾರ್ಥಿಗಳಿಗೆ ಬಣ್ಣಗಾರಿಕೆ ಶಿಬಿರವು ನವೆಂಬರ್ 19 ರಂದು (ನಾಳೆ) ಬೆಳಿಗ್ಗೆ ನೇರಂಬೋಳು ಸಭಾಭವನದಲ್ಲಿ ನಡೆಯಲಿದೆ.
ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಶಿಬಿರ ಉದ್ಘಾಟಿಸಲಿದ್ದು, ರಕ್ತೇಶ್ವರಿ ಯುವಕ ಸಂಘದ ಅಧ್ಯಕ್ಷ ಹರೀಶ್ ಕುಲಾಲ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಯಕ್ಷ ಕಾವ್ಯ ತರಂಗಿಣಿಯ ಅಧ್ಯಕ್ಷೆ ಕು ಸಂಧ್ಯಾ ಪೂಜಾರಿ ದರ್ಬೆ, ಶ್ರೀ ರಕ್ತೇಶ್ವರಿ ಯುವಕ ಸಂಘದ ಗೌರವಾಧ್ಯಕ್ಷ ಮನೋಹರ ನೇರಂಬೋಳು, ಶಕ್ತಿನಗರ ನಾಗಬ್ರಹ್ಮ ಮಹಮ್ಮಾಯಿ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಗುರುಪ್ರಸಾದ್, ಶ್ರೀ ರಕ್ತೇಶ್ವರಿ ಯುವಕ ಸಂಘದ ಗೌರವ ಸಲಹೆಗಾರ ಚಂದ್ರಹಾಸ ಟೈಲರ್, ಸಾಂಸ್ಕೃತಿಕ ಕಾರ್ಯದರ್ಶಿ ಸಚಿನ್, ಯುವ ಭಾಗವತ ಸುಶಾಂತ್ ಕೈಕಂಬ ಮೊದಲಾದವರು ಭಾಗವಹಿಸಲಿದ್ದಾರೆ.
ಇದೇ ವೇಳೆ ಪ್ರಸಾಧನ ಕಲಾವಿದ ಪ್ರಭಾಕರ ಶೆಟ್ಟಿ ತೆಂಕ ಕಾರಂದೂರು ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬಳಿಕ ಮಾಹಿತಿ ಕಾರ್ಯಾಗಾರ, ವ್ಯಕ್ತಿತ್ವ ವಿಕಸನ ಮತ್ತು ಸ್ಪರ್ಧಾಳುಗಳಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದು ಸಂಯೋಜನಾ ಸಂಘಟನೆಯ ಪ್ರಕಟಣೆ ತಿಳಿಸಿದೆ.
0 comments:
Post a Comment