ಬಂಟ್ವಾಳ, ಡಿಸೆಂಬರ್ 24, 2023 (ಕರಾವಳಿ ಟೈಮ್ಸ್) : ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಪತ್ನಿ ಸಮ್ಮುಖದಲ್ಲೇ ದಾರುಣವಾಗಿ ಮೃತಪಟ್ಟು ಪತ್ನಿ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅರ್ಕುಳ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ.
ಮೃತ ದ್ವಿಚಕ್ರ ವಾಹನ ಸವಾರನನ್ನು ಕುಕ್ಕಾಜೆ-ನೋಳ ನಿವಾಸಿ ಹಂಝ ಯಾನೆ ರಮ್ಲಾನ್ (48) ಎಂದು ಗುರುತಿಸಲಾಗಿದೆ. ಹಿಂಬದಿ ಸವಾರಿ ಮಾಡುತ್ತಿದ್ದ ಅವರ ಪತ್ನಿ ರೈಹಾನ ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಹಂಝ ಅವರು ಭಾನುವಾರ ತನ್ನ ಸ್ಕೂಟರಿನಲ್ಲಿ ಪತ್ನಿಯನ್ನು ಕುಳ್ಳಿರಿಸಿಕೊಂಡು ಕೇರಳದಲ್ಲಿ ನಡೆಯುವ ಮದುವೆ ಕಾರ್ಯಕ್ರಮಕ್ಕೆ ತೆರಳುವುದಕ್ಕಾಗಿ ಪತ್ನಿ ಮನೆಯಾದ ಬಜಾಲಿಗೆ ತೆರಳುತ್ತಿದ್ದ ವೇಳೆ ಅರ್ಕುಳದಲ್ಲಿ ಬಸ್ಸು ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟ ಹಂಝ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
0 comments:
Post a Comment