ಬಂಟ್ವಾಳ, ಡಿಸೆಂಬರ್ 19, 2023 (ಕರಾವಳಿ ಟೈಮ್ಸ್) : ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಆಸ್ಪತ್ರೆಗೆ ದಾಖಲಾದ ಘಟನೆ ಬಿ ಮೂಡ ಗ್ರಾಮದ ಬಿ ಸಿ ರೋಡು ಬಸ್ ಡಿಪ್ಪೋ ಎದುರು ಸಂಭವಿಸಿದೆ.
ಗಾಯಗೊಂಡ ಪಾದಚಾರಿ ವ್ಯಕ್ತಿಯನ್ನು ಚಿತ್ರದುರ್ಗ ಜಿಲ್ಲೆಯ ಮಾಳಪ್ಪನ ಹಟ್ಟಿ ಮನೆ ನಿವಾಸಿ ಆರ್ ಪ್ರಭು (54) ಎಂದು ಗುರುತಿಸಲಾಗಿದೆ. ಇವರು ಬಿ ಮೂಡ ಗ್ರಾಮದ ಬಿ ಸಿ ರೋಡು ಬಸ್ ಡಿಪೆÇ್ಪೀ ಎದುರು ನಿಂತಿದ್ದಾಗ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಶನ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದ ಪ್ರಭು ಅವರಿಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಗಾಯಾಳು ಪ್ರಭು ನೀಡಿದ ದೂರಿನಂತೆ ಮಂಗಳವಾರ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment