ಬೆಳ್ತಂಗಡಿ, ಡಿಸೆಂಬರ್ 21, 2023 (ಕರಾವಳಿ ಟೈಮ್ಸ್) : ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಸವಾರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕು, ಕಲ್ಮಂಜ ಗ್ರಾಮದ ನಿಡಿಗಲ್ ಎಂಬಲ್ಲಿ ಬುಧವಾರ ಸಂಭವಿಸಿದೆ.
ಗಾಯಗೊಂಡ ದ್ವಿಚಕ್ರ ವಾಹನ ಸವಾರನನ್ನು ಶೇಖಬ್ಬ ಎಂದು ಗುರುತಿಸಲಾಗಿದೆ. ಶೇಖಬ್ಬ ಅವರು ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಲ್ಲಿ ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ಸಹಿತವಾಗಿ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರನ್ನು ತಕ್ಷಣ ಉಜಿರೆ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment