ಬೆಳ್ತಂಗಡಿ, ಡಿಸೆಂಬರ್ 24, 2023 (ಕರಾವಳಿ ಟೈಮ್ಸ್) : ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬೆಳ್ತಂಗಡಿ ಕಸಬಾ ಗ್ರಾಮದ ಸಂತೆಕಟ್ಟೆ ಬಸ್ಸು ನಿಲ್ದಾಣದ ಬಳಿ ಶುಕ್ರವಾರ ಸಂಜೆ ನಡೆದಿದೆ.
ಗಾಯಗೊಂಡ ದ್ವಿಚಕ್ರ ವಾಹನ ಸವಾರರನ್ನು ಕೃಷ್ಣಪ್ಪ ಭಂಡಾರಿ ಎಂದು ಹೆಸರಿಸಲಾಗಿದೆ. ಇವರು ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಸಂತೆಕಟ್ಟೆ ಬಸ್ಸು ನಿಲ್ದಾಣದ ಬಳಿ ಮುಹಮ್ಮದ್ ರಫೀಕ್ ಎಂಬವರು ಚಲಾಯಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ತೀವ್ರತೆಗೆ ದ್ವಿಚಕ್ರ ವಾಹನ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ತಕ್ಷಣ ಅವರನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment