ಪುತ್ತೂರು, ಡಿಸೆಂಬರ್ 20, 2023 (ಕರಾವಳಿ ಟೈಮ್ಸ್) : ಬೈಕಿಗೆ ಅಟೋ ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರರಾದ ತಾಯಿ-ಮಗ ಗಾಯಗೊಂಡ ಘಟನೆ ಅರಿಯಡ್ಕ ಗ್ರಾಮದ ಶೇಖಮಲೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
ಗಾಯಾಳುಗಳನ್ನು ಬೈಕ್ ಸವಾರ, ಬಲ್ನಾಡು ನಿವಾಸಿ ದಿನೇಶ (20) ಹಾಗೂ ಸಹಸವಾರಿಣಿಯಾಗಿದ್ದ ಅವರ ತಾಯಿ ಕೌಸಲ್ಯ (60) ಎಂದು ಗುರುತಿಸಲಾಗಿದೆ. ದಿನೇಶ್ ಅವರು ತನ್ನ ತಾಯಿಯನ್ನು ಕುಳ್ಳಿರಿಸಿಕೊಂಡು ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಶೇಖಮಲೆ ಎಂಬಲ್ಲಿ ಅಶೋಕ ಎಂಬವರು ಚಲಾಯಿಸುತ್ತಿದ್ದ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಬೈಕ್ ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಾರ್ವಜನಿಕರು ಪುತ್ತೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಪೈಕಿ ಕೌಸಲ್ಯ ಅವರನ್ನು ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತಕ್ಕೆ ಆಟೋ ರಿಕ್ಷಾ ಚಾಲಕನ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎನ್ನಲಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment