ಬಂಟ್ವಾಳ, ಡಿಸೆಂಬರ್ 29, 2023 (ಕರಾವಳಿ ಟೈಮ್ಸ್) : ಬೈಕ್ ಚಾಲಕನ ನಿಯಂತ್ರಣ ಮೀರಿ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸಹಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಎಕ್ಸ್ ಚೇಂಚ್ ಎದುರುಗಡೆ ನಡೆದಿದೆ.
ಗಾಯಾಳೂ ಸಹಸವಾರರನ್ನು ವಿಟ್ಲ ಕಸಬಾ ಗ್ರಾಮದ ನಿವಾಸಿ ಕೊರಗಪ್ಪ (53) ಎಂದು ಹೆಸರಿಸಲಾಗಿದೆ. ಇವರು ಸದಾಶಿವ ಅವರು ಚಲಾಯಿಸುತ್ತಿದ್ದ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ವಿಟ್ಲ ಎಕ್ಸ್ ಚೇಂಚ್ ಬಳಿ ಚಾಲಕನ ನಿಯಂತ್ರಣ ಮೀರಿ ಬೈಕ್ ರಸ್ತೆಗೆ ಉರುಳಿ ಬಿದ್ದಿದೆ. ಈ ವೇಳೆ ಬೈಕ್ ಸಮೇತ ಇಬ್ಬರೂ ರಸ್ತೆಗೆ ಬಿದ್ದಿದ್ದು, ಸಹಸವಾರ ಕೊರಗಪ್ಪ ಅವರಿಗೆ ಗಾಯವಾಗಿದೆ. ತಕ್ಷಣ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment