ಬೆಳ್ತಂಗಡಿ, ಡಿಸೆಂಬರ್ 29, 2023 (ಕರಾವಳಿ ಟೈಮ್ಸ್) : ಸಾರ್ವಜನಿಕ ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕು, ನ್ಯಾಯತರ್ಪು ಗ್ರಾಮದ ನಾಳ ನಿವಾಸಿ ಮಹಮ್ಮದ್ ಅವರು ಡಿ 24 ರಂದು ಬೆಳಿಗ್ಗೆ ಗುರುವಾಯನಕೆರೆ ಎಂಬಲ್ಲಿ ಬೈಕ್ ನಿಲ್ಲಿಸಿ ಕೆಲಸಕ್ಕೆ ಹೋಗಿದ್ದು ಕೆಲಸ ಮುಗಿಸಿ ರಾತ್ರಿ ಬಂದು ನೋಡಿದಾಗ ಬೈಕ್ ಕಳವಾಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಸರದಲ್ಲಿ ಹುಡುಕಾಡಿದರೂ ಯಾವುದೇ ಪತ್ತೆ ಇಲ್ಲದ ಕಾರಣ ಬೆಳ್ತಂಗಡಿ ಪೊಲೀಸರಿಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಹುಡುಕಾಟ ಕೈಗೊಂಡಿದ್ದಾರೆ,
0 comments:
Post a Comment