ಬಂಟ್ವಾಳ, ಡಿಸೆಂಬರ್ 27, 2023 (ಕರಾವಳಿ ಟೈಮ್ಸ್) : ಕೆ ಎಸ್ ಆರ್ ಟಿ ಸಿ ಬಸ್ಸು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಅಪರಿಚಿತ ಪಾದಚಾರಿ ವ್ಯಕ್ತಿ ಮೃತಪಟ್ಟ ಘಟನೆ ಬಿ ಮೂಡ ಗ್ರಾಮದ ಬಿ ಸಿ ರೊಡು ಸಮೀಪದ ಮಿತ್ತಬೈಲು ಎಂಬಲ್ಲಿ ನಡೆದಿದೆ.
ಸೋಮವಾರ ರಾತ್ರಿ ಮಿತ್ತಬೈಲು ಎಂಬಲ್ಲಿ ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯನ್ನು ದಾಟುತ್ತಿದ್ದ ಅಪರಿಚಿತ ಪಾದಚಾರಿಯೊಬ್ಬರಿಗೆ ರಾಮಕೃಷ್ಣ ಎಂಬವರು ಚಲಾಯಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಡಿಕ್ಕಿ ಹೊಡೆದು ಅವರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅಪರಿಚಿತ ವ್ಯಕ್ತಿಯನ್ನು ಸ್ಥಳೀಯರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ವ್ಯಕ್ತಿ ಮರುದಿನ ಅಂದರೆ ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬಸ್ಸು ಚಾಲಕನ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎನ್ನಲಾಗಿದ್ದು, ಈ ಬಗ್ಗೆ ಬಿ ಮೂಡ ಗ್ರಾಮದ ನಿವಾಸಿ ಅಬ್ದುಲ್ ಸಮದ್ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment