ಬಂಟ್ವಾಳ, ಡಿಸೆಂಬರ್ 09, 2023 (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ಸಮೀಪದ ಜೈನರಪೇಟೆಯಲ್ಲಿ ಅಕ್ಕರಂಗಡಿ ಜುಮಾ ಮಸೀದಿ ಮುಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಬಂಟ್ವಾಳ ಸಂಚಾರಿ ಪೊಲೀಸ್ ಠಾಣಾ ಕಟ್ಟಡವನ್ನು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ರಿಷ್ಯಂತ್ ಸಿ ಬಿ ಅವರು ಪರಿಶೀಲನೆ ನಡೆಸಿದರು.
ಇದೇ ವೇಳೆ ಕಟ್ಟಡ ಗುತ್ತಿಗೆದಾರರಿಗೆ ಅವರು ಸೂಕ್ತ ಸಲಹೆ-ಸೂಚನೆಗಳನ್ನು ನೀಡಿದರು. ಈ ಸಂದರ್ಭ ಬಂಟ್ವಾಳ ಉಪವಿಭಾಗಾಧಿಕಾರಿಗಳು, ಸ್ಥಳೀಯ ಠಾಣೆಗಳ ಠಾಣಾಧಿಕಾರಿಗಳು ಹಾಗೂ ಹೌಸಿಂಗ್ ಬೋರ್ಡ್ ಕಾರ್ಪರೇಶನ್ನಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಪಸ್ಥಿತರಿದ್ದರು.
0 comments:
Post a Comment