ಬಂಟ್ವಾಳ, ಡಿಸೆಂಬರ್ 17, 2023 (ಕರಾವಳಿ ಟೈಮ್ಸ್) : ಕೆ ಎಸ್ ಅರ್ ಟಿ ಸಿ ಬಸ್ಸು ಡಿಕ್ಕಿಯಾಗಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ಇಡ್ಕಿದು ಗ್ರಾಮದ ಕುವೆತ್ತಲ ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.
ಮೃತ ಬೈಕ್ ಸವಾರನನ್ನು ಬಿ ಸಿ ರೋಡು ನಿವಾಸಿ ಅಹಮ್ಮದ್ ಆಶಿಂ ಅಕ್ಮಲ್ (18) ಎಂದು ಹೆಸರಿಸಲಾಗಿದೆ. ಮಂಗಳೂರಿನಿಂದ ಪುತ್ತೂರು ಕಡೆ ಸಂಚರಿಸುತ್ತಿದ್ದ ಸರಕಾರಿ ಬಸ್ಸಿಗೆ ಪುತ್ತೂರು ಕಡೆಯಿಂದ ಬಿ ಸಿ ರೋಡು ಕಡೆ ಸಂಚರಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಅಕ್ಮಲ್ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದರಾದರೂ ಅದಾಗಲೇ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಘಟನೆಯಿಂದ ಬೈಕ್ ಸಂಪೂರ್ಣ ಜಖಂಗೊಂಡಿದೆ. ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ನೆಟ್ಲಮುಡ್ನೂರು ನಿವಾಸಿ ವಿನೋದ್ ಕುಮಾರ್ ಅವರು ನೀಡಿದ ದೂರಿನಂತೆ ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment