ಬೆಳ್ತಂಗಡಿ, ಡಿಸೆಂಬರ್ 21, 2023 (ಕರಾವಳಿ ಟೈಮ್ಸ್) : ಚಾರ್ಮಾಡಿ ನದಿಯಿಂದ ಅಕ್ರಮವಾಗಿ ಮರಳು ಕಳವು ಮಾಡಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಧರ್ಮಸ್ಥಳ ಠಾಣಾ ಪೊಲೀಸರು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಸತ್ಯನಪಲ್ಕೆ ಮೂರು ಮಾರ್ಗ ಜಂಕ್ಷನ್ನಿನಲ್ಲಿ ಗುರುವಾರ ಮಧ್ಯಾಹ್ನ ಪತ್ತೆ ಹಚ್ಚಿದ್ದಾರೆ.
ಚಾರ್ಮಾಡಿಯ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಮರಳು ಕಳವು ಮಾಡಿ, ಗುರುವಾರ ಮಧ್ಯಾಹ್ನ ಮಾರಾಟ ಮಾಡಲು ಕೆಎ 21 ಬಿ 0793 ನೋಂದಣಿ ಸಂಖ್ಯೆಯ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಧರ್ಮಸ್ಥಳ ಠಾಣಾ ಪೆÇಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳ ತಂಡ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಸತ್ಯನಪಲ್ಕೆ ಮೂರು ಮಾರ್ಗ ಜಂಕ್ಷನ್ ಎಂಬಲ್ಲಿ ಪತ್ತೆಹಚ್ಚಿರುತ್ತಾರೆ. ಈ ಬಗ್ಗೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment