ಕಡಬ, ಡಿಸೆಂಬರ್ 23, 2023 (ಕರಾವಳಿ ಟೈಮ್ಸ್) : ಮನೆಯ ಶೆಡ್ಡಿನಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವಾಗಿರುವ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಕೊರಮೇರು ಎಂಬಲ್ಲಿ ಶುಕ್ರವಾರ ನಡೆದಿದ್ದು, ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಚ್ಲಂಪಾಡಿ ನಿವಾಸಿ ಜಯರಾಜ ಕೆ ಅವರು ತನ್ನ 20 ಸಾವಿರ ರೂಪಾಯಿ ಅಂದಾಜು ಮೌಲ್ಯದ ಯಮಹಾ ಆರ್ ಎಕ್ಸ್ ಬೈಕನ್ನು ಗುರುವಾರ ರಾತ್ರಿ ತನ್ನ ಮನೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದು, ಶುಕ್ರವಾರ ಬೆಳಿಗ್ಗೆ ನೋಡುವಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಜಯರಾಜ್ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment