ಬಂಟ್ವಾಳ, ಡಿಸೆಂಬರ್ 19, 2023 (ಕರಾವಳಿ ಟೈಮ್ಸ್) : ಬೈಕಿಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸಜಿಪಪಡು ಗ್ರಾಮದ ಸಜಿಪ ಜಂಕ್ಷನ್ನಿನಲ್ಲಿ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ.
ಗಾಯಾಳು ಬೈಕ್ ಸವಾರನನ್ನು ಖಲಂದರ್ ಶಾಫಿ (19) ಎಂದು ಗುರುತಿಸಲಾಗಿದೆ. ಈತ ತನ್ನ ಬೈಕಿನಲ್ಲಿ ಬರುತ್ತಿದ್ದಾಗ ಸಜಿಪ ಜಂಕ್ಷನ್ನಿನ್ನಲ್ಲಿ ರಿತೇಶ್ ಆಚಾರ್ಯ ಅವರು ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸಮೇತ ರಸ್ತೆಗೆ ಬಿದ್ದ ಶಾಫಿ ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಬಗ್ಗೆ ಬೋಳಿಯಾರು ನಿವಾಸಿ ಮೊಹಮ್ಮದ್ ಮುಸ್ತಾಫ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment