ಬೆಳ್ತಂಗಡಿ, ಡಿಸೆಂಬರ್ 28, 2023 (ಕರಾವಳಿ ಟೈಮ್ಸ್) : ಮರಳು ಕದ್ದು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ ಘಟನೆ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಬುಧವಾರ (ಡಿ 27) ಬೆಳಿಗ್ಗೆ ನಡೆದಿದೆ.
ಬುಧವಾರ ಬೆಳಿಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಪಿಎಸ್ಸೈ ಧನರಾಜ್ ಟಿ ಎಂ ನೇತೃತ್ವದ ಪೊಲೀಸರು ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ, ಕೆಎ-21-ಬಿ-5262 ನೋಂದಣಿ ಸಂಖ್ಯೆಯ ಲಾರಿಯನ್ನು ತಡೆದಾಗ, ಲಾರಿ ಚಾಲಕ ರಂಜಿತ್ ಎಂಬಾತ ಲಾರಿಯನ್ನು ನಿಲ್ಲಿಸಿ ತನ್ನ ಸಹಚರ ರಾಧಾಕೃಷ್ಣ ಕಡಿರುದ್ಯಾವರ ಎಂಬಾತನೊಂದಿಗೆ ಸ್ಥಳದಿಂದ ಓಡಿ ಹೋಗಿದ್ದಾರೆ. ಲಾರಿಯನ್ನು ಪೊಲೀಸರು ಪರಿಶೀಲನೆ ನಡೆಸಿದಾಗ ಯಾವುದೇ ದಾಖಲಾತಿ ಇಲ್ಲದೆ ಚಾಲಕ ಹಾಗೂ ಸಹಚರ ಎಲ್ಲಿಂದಲೋ ಕಳವು ಮಾಡಿಕೊಂಡು ಬಂದ ಸುಮಾರು 15 ಸಾವಿರ ರೂಪಾಯಿ ಮೌಲ್ಯದ ಮರಳನ್ನು ಲಾರಿಯಲ್ಲಿ ತುಂಬಿಸಿಕೊಂಡು ಸಾಗಾಟ ಮಾಡಿರುವುದು ಪತ್ತೆಯಾಗಿದೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 122/2023 ಕಲಂ 379 IPC ಯಂತೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
0 comments:
Post a Comment