ಬೆಂಗಳೂರು, ಡಿಸೆಂಬರ್ 24, 2023 (ಕರಾವಳಿ ಟೈಮ್ಸ್) : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂಜಿನಿಯರಿಂಗ್, ಫಾರ್ಮಸಿ, ಪಶುವೈದ್ಯಕೀಯ ವಿಜ್ಞಾನ ಮತ್ತು ಕೃಷಿ ಮೊದಲಾದ ವೃತಿಪರ ಕೋರ್ಸ್‍ಗಳಿಗೆ ಸಂಬಂಧಿಸಿದಂತೆ 2024 ರ ಎಪ್ರಿಲ್ 20 ಮತ್ತು 21 ರಂದು ಸಿಇಟಿ ಪರೀಕ್ಷೆ ನಡೆಸಲಿದೆ. ಜನವರಿ 10 ರಿಂದ ಈ ಬಗ್ಗೆ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಎಸ್ ಅವರು ತಿಳಿಸಿದ್ದಾರೆ.
ಮೊದಲ ಬಾರಿಗೆ, ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಸೇರಿದಂತೆ ಎಲ್ಲಾ ವೃತ್ತಿಪರ ಕೋರ್ಸ್‍ಗಳಿಗೆ ಪರೀಕ್ಷೆ ಮತ್ತು ಕೌನ್ಸೆಲಿಂಗ್‍ಗೆ ಸಾಮಾನ್ಯ ಅರ್ಜಿ ಇದೆ. ಆನ್‍ಲೈನ್ ಅರ್ಜಿಯನ್ನು ಭರ್ತಿ ಮಾಡುವಾಗ ಅಭ್ಯರ್ಥಿಗಳು ತಮ್ಮ ಸರಿಯಾದ ಆರ್ ಡಿ (ಕಂದಾಯ ದಾಖಲೆಗಳು) ಸಂಖ್ಯೆಯನ್ನು ನಮೂದಿಸಲು ಸೂಚಿಸಲಾಗಿದೆ. ಇದನ್ನು ಮಾಡದಿದ್ದರೆ ಪ್ರಕ್ರಿಯೆಯು ಅಪೂರ್ಣವಾಗಿರುತ್ತದೆ. ಅಭ್ಯರ್ಥಿಯು ಆರ್ ಡಿ ಸಂಖ್ಯೆ ಹೊಂದಿರುವ ಜಾತಿ ಪ್ರಮಾಣಪತ್ರ ಹೊಂದಿರಬೇಕು, ತಪ್ಪಿದಲ್ಲಿ ಅಂತಹ ಅಭ್ಯರ್ಥಿಗಳು ಜಾತಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ ಎಂದವರು ತಿಳಿಸಿದ್ದಾರೆ.
ಆರ್ಕಿಟೆಕ್ಚರ್, ಬಿಪಿಟಿ, ಬಿಎಸ್ಸಿ ಅಲೈಡ್ ಹೆಲ್ತ್ ಸೈನ್ಸಸ್, ಮತ್ತು ಬಿಪಿಒ ಕೋರ್ಸ್‍ಗಳ ಆಕಾಂಕ್ಷಿ ವಿದ್ಯಾರ್ಥಿಗಳು ಸಹ ತಮ್ಮ ಅರ್ಜಿಗಳನ್ನು ಸಹ ಭರ್ತಿ ಮಾಡಬೇಕು. ಹೆಚ್ಚಿನ ಪ್ರಶ್ನೆಗಳಿಗೆ keaugcet2024@gmail.com ಗೆ ಇಮೇಲ್ ಮಾಡಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಭ್ಯರ್ಥಿಗಳಿಗೆ ಸೂಚಿಸಿದೆ.
0 comments:
Post a Comment