ಬಂಟ್ವಾಳ, ಡಿಸೆಂಬರ್ 05, 2023 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಕ್ರಮಾಂಕ 06/2017 ನೇದರಲ್ಲಿ ಆರೋಪಿಯಾಗಿದ್ದು, ಸುಮಾರು 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ, ಪಲೆಮಾ ಹೇಹರು ಅಂಚೆ ವ್ಯಾಪ್ತಿಯ ಚಿನ್ನಪಲ್ಲಿ ಪೆದ್ದ ಬಿಲಾಲ್ ಮಸ್ಜಿದ್ ಸಮೀಪದ ನಿವಾಸಿ ಬಿ ಮೌಲಾ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಮಂಗಳವಾರ ದೇರಳಕಟ್ಟೆ ಸಮೀಪದ ಕುತ್ತಾರು ಎಂಬಲ್ಲಿಂದ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ ಎಚ್ ಸಿ ಗಣೇಶ್ ಪ್ರಸಾದ್ ಹಾಗೂ ಪಿ ಸಿ ವಿಜಯಕುಮಾರ ಅವರು ಈ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
0 comments:
Post a Comment