ಬಂಟ್ವಾಳ, ಡಿಸೆಂಬರ್ 04, 2023 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಕ್ರಮಾಂಕ 240/2014 ರಲ್ಲಿ ಆರೋಪಿಯಾಗಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ತಾಲೂಕು ಮಂಜನಾಡಿ ಗ್ರಾಮದ ನಾಟೆಕಲ್-ಉರುಮನೆ ನಿವಾಸಿ ಅಶ್ರಫ್ ಎಂಬಾತನನ್ನು ಬಂಟ್ವಾಳ ಗ್ರಾಮಾಂತ ಪೊಲೀಸರು ಸೋಮವಾರ ದೇರಳಕಟ್ಟೆ ಸಮೀಪದ ಕುತ್ತಾರು ಎಂಬಲ್ಲಿಂದ ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ ಗಣೇಶ್ ಪ್ರಸಾದ್ ಹಾಗೂ ವಿಜಯ ಕುಮಾರ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
0 comments:
Post a Comment