ಬೆಳ್ತಂಗಡಿ, ಡಿಸೆಂಬರ್ 11, 2023 (ಕರಾವಳಿ ಟೈಮ್ಸ್) : ತಾಲೂಕಿನ ಕುವಟ್ಟು ಗ್ರಾಮದ ನಿವಾಸೊ ಸುಲೈಮಾನ್ ಅವರ ಮನೆಗೆ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಸಾವಿರಾರು ರೂಪಾಯಿ ನಗದು ಹಣವನ್ನು ಕಳವುಗೈದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶನಿವಾರ ಸಂಜೆಯಿಂದ ಭಾನುವಾರ ಸಂಜೆಯ ಮಧ್ಯದ ಅವಧಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮನೆಯ ಎದುರಿನ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಬೆಡ್ ರೂಮಿನ ಗೋಡ್ರೇಜಿನ ಬಾಗಿಲು ಮುರಿದು ಅದರಲ್ಲಿದ್ದ 69.5 ಗ್ರಾಂ ತೂಕದ ಚಿನ್ನಾಭರಣ ಹಾಗೂ 40 ಸಾವಿರ ರೂಪಾಯಿ ನಗದು ಹಣವನ್ನು ದೋಚಿದ್ದಾರೆ. ಕಳವುಗೈದ ಸೊತ್ತುಗಳ ಒಟ್ಟು ಮೌಲ್ಯ 3 ಲಕ್ಷದ 87 ಸಾವಿರದ 500 ರೂಪಾಯಿ ಆಗಿರುತ್ತದೆ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
0 comments:
Post a Comment