ಬೆಳ್ತಂಗಡಿ, ಡಿಸೆಂಬರ್ 24, 2023 (ಕರಾವಳಿ ಟೈಮ್ಸ್) : ನ್ಯಾಯಾಲಯದ ತಡೆಯಾಜ್ಞೆ ಇರುವ ಜಮೀನಿಗೆ ಅಕ್ರಮ ಪ್ರವೇಶಿಸಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ವ್ಯಕ್ತಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ನಿವಾಸಿ ಗೋಪ ಕುಮಾರ (53) ಅವರು ಪೊಲೀಸರಿಗೆ ದೂರು ನೀಡಿದ್ದು, ಬೆಳ್ತಂಗಡಿ ಗರ್ಡಾಡಿ ಗ್ರಾಮದ ನಡುಕುಡ್ಡಿ ಎಂಬಲ್ಲಿರುವ ಗೋಪ ಕುಮಾರ್ ಅವರ ಸ್ವಾಧೀನದಲ್ಲಿರುವ ಜಮೀನಿಗೆ ಅತಿಕ್ರಮಣ ಮಾಡದಂತೆ ದ.ಕ. ಜಿಲ್ಲಾ ನ್ಯಾಯಾಲಯದಿಂದ ತಡೆಯಾಜ್ಞೆ ಹೊರಡಿಸಿದರೂ, ಶನಿವಾರ ಬೆಳಿಗ್ಗೆ ಆರೋಪಿಗಳಾದ ರಾಜೇಶ್ ಪ್ರಭು ಹಾಗೂ ಪ್ರಕಾಶ್ ಸುವರ್ಣ ಅವರುಗಳು ಇತರ 10-12 ಮಂದಿಯೊಂದಿಗೆ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಮಾರಕಾಸ್ತ್ರಗಳನ್ನು ತೋರಿಸಿ, ಗೋಪ ಕುಮಾರರನ್ನುದ್ಧೇಶಿಸಿ ಜೀವ ಬೆದರಿಕೆ ಹಾಕಿರುವುದಲ್ಲದೆ, ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುತ್ತಾರೆ ಎಂದು ನೀಡಿದ ದೂರಿನಂತೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 121/2023 ಕಲಂ 447, 143, 147, 148, 506 ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment