ಬಂಟ್ವಾಳ, ಡಿಸೆಂಬರ್ 22, 2023 (ಕರಾವಳಿ ಟೈಮ್ಸ್) : ಪುದು ಗ್ರಾಮದ ಸುಜೀರ್ ಎಂಬಲ್ಲಿ ನೇತ್ರಾವತಿ ನದಿಯಿಂದ ಮರಳು ಕದ್ದು ದಾಸ್ತಾನು ಮಾಡಿದ ಪ್ರಕರಣವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಶುಕ್ರವಾರ ಪತ್ತೆ ಹಚ್ಚಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣಾ ಪಿಎಸ್ಸೈ ಹರೀಶ್ ಎಂ ಆರ್ ನೇತೃತ್ವದ ಪೊಲೀಸರು ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆ ಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 60 ಸಾವಿರ ರೂಪಾಯಿ ಮೌಲ್ಯದ ಸುಮಾರು 36 ಯೂನಿಟಿನಷ್ಟು 12 ಲೋಡ್ ಮರಳನ್ನು ಪ್ರತ್ಯೇಕ ದಿಣ್ಣೆ ಮಾಡಿ ದಾಸ್ತಾನು ಮಾಡಿರುವುದನ್ನು ಪತ್ತೆ ಹಚ್ಚಿದ್ದಾರೆ.
ಮರಳನ್ನು ಸ್ವಾಧೀನಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
0 comments:
Post a Comment