ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿ ಪ್ರಕಟ, ಮಾರ್ಚ್ 1 ರಿಂದ 22ರವರೆಗೆ ಪಿಯುಸಿ ಹಾಗೂ ಮಾರ್ಚ್ 25 ರಿಂದ ಎಪ್ರಿಲ್ 6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ - Karavali Times ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿ ಪ್ರಕಟ, ಮಾರ್ಚ್ 1 ರಿಂದ 22ರವರೆಗೆ ಪಿಯುಸಿ ಹಾಗೂ ಮಾರ್ಚ್ 25 ರಿಂದ ಎಪ್ರಿಲ್ 6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ - Karavali Times

728x90

17 January 2024

ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿ ಪ್ರಕಟ, ಮಾರ್ಚ್ 1 ರಿಂದ 22ರವರೆಗೆ ಪಿಯುಸಿ ಹಾಗೂ ಮಾರ್ಚ್ 25 ರಿಂದ ಎಪ್ರಿಲ್ 6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ

ಬೆಂಗಳೂರು, ಜನವರಿ 17, 2024 (ಕರಾವಳಿ ಟೈಮ್ಸ್) : ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ 1ರ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿ ಪ್ರಕಟ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ ಮಾರ್ಚ್ 22 ವರೆಗೆ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾರ್ಚ್ 25 ರಿಂದ ಎಪ್ರಿಲ್ 6ವರೆಗೆ ನಡೆಯಲಿದೆ ಎಂದು ಪಟ್ಟಿಯಲ್ಲಿ ಪ್ರಕಟಿಸಲಾಗಿದೆ. 


ಎಸ್ಸೆಸ್ಸೆಲ್ಸಿ ವೇಳಾಪಟ್ಟಿ ಈ ರೀತಿ ಇದೆ : ಮಾರ್ಚ್ 25 ರಂದು ಪ್ರಥಮ ಭಾಷೆ, ಮಾರ್ಚ್ 27 ರಂದು ಸಮಾಜ ವಿಜ್ಞಾನ, ಮಾರ್ಚ್ 30 ರಂದು ವಿಜ್ಞಾನ, ಎಪ್ರಿಲ್ 2ರಂದು ಗಣಿತ, ಎಪ್ರಿಲ್ 4 ರಂದು ತೃತೀಯ ಭಾಷೆ, ಎಪ್ರಿಲ್ 6 ರಂದು ದ್ವೀತಿಯ ಭಾಷೆ ಪರೀಕ್ಷೆಗಳು ನಡೆಯಲಿದೆ. 


ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಈ ರೀತಿ ಇದೆ : ಮಾರ್ಚ್ 1 ರಂದು ಕನ್ನಡ, ಅರೇಬಿಕ್, ಮಾರ್ಚ್ 4 ರಂದು ಗಣಿತ, ಶಿಕ್ಷಣ ಶಾಸ್ತ್ರ, ಮಾರ್ಚ್ 5 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾರ್ಚ್ 6 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್, ಮಾರ್ಚ್ 7 ರಂದು ಇತಿಹಾಸ, ಭೌತಶಾಸ್ತ್ರ, ಮಾರ್ಚ್ 9 ರಂದು ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, ಮಾರ್ಚ್ 11 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಮಾರ್ಚ್ 13 ರಂದು ಇಂಗ್ಲಿಷ್, ಮಾರ್ಚ್ 15 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ, ಮಾರ್ಚ್ 16 ರಂದು ಅರ್ಥಶಾಸ್ತ್ರ, ಮಾರ್ಚ್ 18 ರಂದು ಭೂಗೋಳಶಾಸ್ತ್ರ, ಜೀವಶಾಸ್ತ್ರ, ಮಾರ್ಚ್ 20 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ, ಮಾರ್ಚ್ 21 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಮಾರ್ಚ್ 22 ರಂದು ಹಿಂದಿ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆಗಳು ಬೆಳಿಗ್ಗೆ 10.15 ರಿಂದ ಅಪರಾಹ್ನ 1.30ರವರೆಗೆ ನಡೆಯಲಿದೆ ಎಂದು ಬೋರ್ಡ್ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿ ಪ್ರಕಟ, ಮಾರ್ಚ್ 1 ರಿಂದ 22ರವರೆಗೆ ಪಿಯುಸಿ ಹಾಗೂ ಮಾರ್ಚ್ 25 ರಿಂದ ಎಪ್ರಿಲ್ 6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ Rating: 5 Reviewed By: karavali Times
Scroll to Top