ಬಂಟ್ವಾಳ, ಜನವರಿ 02, 2024 (ಕರಾವಳಿ ಟೈಮ್ಸ್) : ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸಹಿತ ನಾಲ್ವರು ಗಾಯಗೊಂಡ ಘಟನೆ ಬಿ ಮೂಡ ಗ್ರಾಮ ಬಂಟಗುರಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.
ಗಾಯಗೊಂಡವರನ್ನು ಅಟೋ ರಿಕ್ಷಾ ಚಾಲಕ ಅಬ್ದುಲ್ ಸಲಾಂ, ಅವರ ಮಕ್ಕಳಾದ ಆಯಿಷಾ ಸಿಜಾ ಶಿರಿನ್, ಫಾತಿಮಾ ಶೈಬಾ ಹಾಗೂ ಜೈನಬಾ ಆಫಿಯಾ ಎಂದು ಹೆಸರಿಸಲಾಗಿದೆ.
ಅಬ್ದುಲ್ ಸಲಾಂ ಅವರು ತನ್ನ ಅಟೋ ರಿಕ್ಷಾದಲ್ಲಿ ಮಕ್ಕಳೊಂದಿಗೆ ಸಂಚರಿಸುತ್ತಿದ್ದ ವೇಳೆ ಬಿ ಮೂಡ ಗ್ರಾಮದ ಬಂಟಗುರಿ ಎಂಬಲ್ಲಿ ಪ್ರಭಾಕರ ಸೋಮಯಾಜಿ ಅವರು ಚಲಾಯಿಸುತ್ತಿದ್ದ ಓಮ್ನಿ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಅಟೋ ರಿಕ್ಷಾ ರಸ್ತೆಯಲ್ಲಿ ಮಗುಚಿ ಬಿದ್ದು ಚಾಲಕ ಸಹಿತ ಮಕ್ಕಳು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣ ತುಂಬೆ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಿಸಲಾಗಿದೆ. ಈ ಬಗ್ಗೆ ಬಿ ಮೂಡ ನಿವಾಸಿ ಅಬ್ದುಲ್ ಜಬ್ಬಾರ್ ಅವರು ನೀಡಿದ ದೂದಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment