ಬಂಟ್ವಾಳ, ಜನವರಿ 29, 2024 (ಕರಾವಳಿ ಟೈಮ್ಸ್) : ಬೈಕ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ದ ವ್ಯಕ್ತಿಯೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಾವೂರು ಗ್ರಾಮದ ಕೊಪ್ಪಳ-ನೂಜಿ ಎಂಬಲ್ಲಿ ಶನಿವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.
ಗಾಯಾಳು ವ್ಯಕ್ತಿಯನ್ನು ಮೂಡನಡುಗೋಡು ಗ್ರಾಮದ ನಿವಾಸಿ ವಾಸುದೇವ ಶೆಣೈ (75) ಎಂದು ಗುರುತಿಸಲಾಗಿದೆ. ಇವರು ನಾವುರು ಗ್ರಾಮದ ಕೊಪ್ಪಳ ನೂಜಿ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಸಂಕೇತ್ ಎಂಬವರು ಚಲಾಯಿಸಿಕೊಂಡು ಬಂದ ಎಫ್ ಝಡ್ ಎಕ್ಸ್ ಬೈಕ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಗಾಯಗೊಂಡ ವಾಸುದೇವ ಶೆಣೈ ಅವರನ್ನು ಸ್ಥಳೀಯರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment