ಬೆಳ್ತಂಗಡಿ, ಜನವರಿ 20, 2024 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಹ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕುವೆಟ್ಟು ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ಶನಿವಾರ (ಜ 20) ಬೆಳಿಗ್ಗೆ ನಡೆದಿದೆ.
ಗಾಯಾಳು ಬೈಕ್ ಸಹಸವಾರನನ್ನು ಸ್ಥಳೀಯ ನಿವಸಿ ಶಮೀರ್ ಎಂದು ಹೆಸರಿಸಲಾಗಿದೆ. ಶಮೀರ್ ಅವರ ಸಹೋದರ ಶವನ್ ಅವರು ಶಮೀರ್ ಅವರನ್ನು ಕುಳ್ಳಿರಿಸಿಕೊಂಡು ಬೈಕ್ ಚಲಾಯಿಸಿಕೊಂಡು ತೆರಳುತ್ತಿದ್ದ ವೇಳೆ ಅಬ್ದುಲ್ಲ ಎಂಬವರು ವಿರುದ್ದ ದಿಕ್ಕಿನಿಂದ ಕಾರು ಚಲಾಯಿಸಿಕೊಂಡು ಬಂದು ಬೈಕಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಬೈಕ್ ಸವಾರರಿಬ್ಬರು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದು, ಸಹ ಸವಾರ ಶಮೀರ್ ಅವರು ಗಾಯಗೊಂಡಿದ್ದಾರೆ. ಗಾಯಾಳು ಶಮೀರ್ ಅವರನ್ನು ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment