ಪುತ್ತೂರು, ಜನವರಿ 12, 2024 (ಕರಾವಳಿ ಟೈಮ್ಸ್) : ಅಂಗಡಿಗೆ ವ್ಯಾಪಾರ ಮಾಡುವ ನೆಪದಲ್ಲಿ ಬಂದ ಇಬ್ಬರು ಅಪರಿಚಿತರು ಅಂಗಡಿಯಲ್ಲಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಬಂಗಾರದ ಸರ ಎಳೆದು ಪರಾರಿಯಾದ ಘಟನೆ ಕೊಳ್ತಿಗೆ ಗ್ರಾಮದ ಪಾಂಬಾರು ಎಂಬಲ್ಲಿ ನಡೆದಿದೆ.
ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ನಿವಾಸಿ ಜಯಂತಿ ಸಿ (50) ಅವರು ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪಾಂಬಾರು ಎಂಬಲ್ಲಿ ಗೂಡಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದಾಗ, ಸ್ಕೂಟರಿನಲ್ಲಿ ಬಂದ ಇಬ್ಬರು ಅಪರಿಚಿತರು ವಾಹನ ನಿಲ್ಲಿಸಿ, ಅಂಗಡಿಗೆ ಬಂದು ವ್ಯಾಪಾರ ಮಾಡುವ ನೆಪದಲ್ಲಿ ಡ್ರಾವರಿಗೆ ಕೈ ಹಾಕಲು ಪ್ರಯತ್ನಿಸಿದ್ದಾರೆ. ತಕ್ಷಣ ಮಹಿಳೆ ಡ್ರಾವರನ್ನು ದೂಡಿದ್ದಾರೆ. ಈ ವೇಳೆ ಅಪರಿಚಿತ ವ್ಯಕ್ತಿ ಕೂಡಲೇ ಜಯಂತಿ ಅವರ ಕೊರಳಿಗೆ ಕೈ ಹಾಕಿ ಕುತ್ತಿಗೆಯಲ್ಲಿ ಧರಿಸಿದ್ದ ಬಂಗಾರದ ಸರವನ್ನು ಬಲವಂತವಾಗಿ ಎಳೆದುಕೊಂಡು ಓಡಿ ಬಂದ ಸ್ಕೂಟರಿನಲ್ಲಿ ಪರಾರಿಯಾಗಿರುತ್ತಾರೆ.
ಸುಲಿಗೆಯಾದ ಆಭರಣ ಸುಮಾರು 16 ಗ್ರಾಂ ತೂಕ ಇದ್ದು ಅದರ ಈಗಿನ ಮೌಲ್ಯ 80 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಬೆಳ್ಳಾರೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment