ಅಯೋಧ್ಯೆ ಧಾರ್ಮಿಕ ಕಾರ್ಯಕ್ರಮ ಹಿನ್ನಲೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಗಸ್ತು ಬಿಗಿಗೊಳಿಸಲಾಗಿದೆ, ಸಾಮಾಜಿಕ ಜಾಲತಾಣಗಳ ಮೇಲೆಯೂ ಹದ್ದಿನ ಕಣ್ಣು : ಎಸ್ಪಿ ರಿಷ್ಯಂತ್ - Karavali Times ಅಯೋಧ್ಯೆ ಧಾರ್ಮಿಕ ಕಾರ್ಯಕ್ರಮ ಹಿನ್ನಲೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಗಸ್ತು ಬಿಗಿಗೊಳಿಸಲಾಗಿದೆ, ಸಾಮಾಜಿಕ ಜಾಲತಾಣಗಳ ಮೇಲೆಯೂ ಹದ್ದಿನ ಕಣ್ಣು : ಎಸ್ಪಿ ರಿಷ್ಯಂತ್ - Karavali Times

728x90

21 January 2024

ಅಯೋಧ್ಯೆ ಧಾರ್ಮಿಕ ಕಾರ್ಯಕ್ರಮ ಹಿನ್ನಲೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಗಸ್ತು ಬಿಗಿಗೊಳಿಸಲಾಗಿದೆ, ಸಾಮಾಜಿಕ ಜಾಲತಾಣಗಳ ಮೇಲೆಯೂ ಹದ್ದಿನ ಕಣ್ಣು : ಎಸ್ಪಿ ರಿಷ್ಯಂತ್

 ಮಂಗಳೂರು, ಜನವರಿ 21, 2024 (ಕರಾವಳಿ ಟೈಮ್ಸ್) : ಅಯೋಧ್ಯೆಯಲ್ಲಿ ಜನವರಿ 22 ರಂದು (ನಾಳೆ) ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟಣೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ, ಈಗಾಗಲೇ ಕೆ.ಎಸ್.ಆರ್.ಪಿ ಪಡೆ ಹಾಗೂ ಡಿ.ಎ.ಆರ್ ಪಡೆಗಳನ್ನು ಜಿಲ್ಲೆಯಾದ್ಯಂತ ನಿಯೋಜಿಸಲಾಗಿದೆ. ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ, ಆಯಾ ಠಾಣಾ ಪೆÇಲೀಸರಿಂದ ಹಗಲು ಗಸ್ತು ಹಾಗೂ ರಾತ್ರಿ ಗಸ್ತನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ರಿಷ್ಯಂತ್ ಸಿ ಬಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಸುದ್ದಿಗಳ ಮೇಲೆಯೂ ನಿರಂತರವಾಗಿ ನಿಗಾ ವಹಿಸಲಾಗುತ್ತಿದೆ. ಸೂಕ್ತ ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ರೀತಿಯ ಅಕ್ಷೇಪಾರ್ಹ ಬರಹ ಅಥವಾ ಬಿತ್ತಿ ಚಿತ್ರಗಳು ಪ್ರದರ್ಶಿಸುವುದು ಅಥವಾ ಅವುಗಳನ್ನು ಅಳವಡಿಸಿದಲ್ಲಿ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿರುವ ಜಿಲ್ಲಾ ಎಸ್ಪಿ ಅವರು, ಈ ಬಗ್ಗೆ ತುರ್ತು ಸಂಪರ್ಕಕ್ಕಾಗಿ ದ.ಕ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 0824-2220500 ಅಥವಾ 112 ಸಹಾಯವಾಣಿಗೆ ಕರೆ ಮಾಡುವಂತೆ ಸಾರ್ವಜನಿಕರಿಗೆ ಅವರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಅಯೋಧ್ಯೆ ಧಾರ್ಮಿಕ ಕಾರ್ಯಕ್ರಮ ಹಿನ್ನಲೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಗಸ್ತು ಬಿಗಿಗೊಳಿಸಲಾಗಿದೆ, ಸಾಮಾಜಿಕ ಜಾಲತಾಣಗಳ ಮೇಲೆಯೂ ಹದ್ದಿನ ಕಣ್ಣು : ಎಸ್ಪಿ ರಿಷ್ಯಂತ್ Rating: 5 Reviewed By: karavali Times
Scroll to Top