ಜಿಲ್ಲಾ ಪೊಲೀಸ್ ಇಲಾಖೆ ಆಶ್ರಯದಲ್ಲಿ ಬಿ.ಸಿ.ರೋಡಿನಲ್ಲಿ ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಕಾಲ್ಮಡಿಗೆ ಹಾಗೂ ಮ್ಯಾರಥಾನ್ ಕಾರ್ಯಕ್ರಮ - Karavali Times ಜಿಲ್ಲಾ ಪೊಲೀಸ್ ಇಲಾಖೆ ಆಶ್ರಯದಲ್ಲಿ ಬಿ.ಸಿ.ರೋಡಿನಲ್ಲಿ ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಕಾಲ್ಮಡಿಗೆ ಹಾಗೂ ಮ್ಯಾರಥಾನ್ ಕಾರ್ಯಕ್ರಮ - Karavali Times

728x90

7 January 2024

ಜಿಲ್ಲಾ ಪೊಲೀಸ್ ಇಲಾಖೆ ಆಶ್ರಯದಲ್ಲಿ ಬಿ.ಸಿ.ರೋಡಿನಲ್ಲಿ ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಕಾಲ್ಮಡಿಗೆ ಹಾಗೂ ಮ್ಯಾರಥಾನ್ ಕಾರ್ಯಕ್ರಮ

ಬಂಟ್ವಾಳ, ಜನವರಿ 07, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ಘಟಕದ ಆಶ್ರಯದಲ್ಲಿ ಹಾಗೂ ವಿವಿಧ ಇಲಾಖೆಗಳು, ಶಿಕ್ಷಣ ಸಂಸ್ಥೆಗಳು, ಸಂಘ ಸಂಸ್ಥೆಗಳು ಹಾಗೂ ನಾಗರೀಕರ ಸಹಭಾಗಿತ್ವದಲ್ಲಿ ಬಿ ಸಿ ರೋಡು ತಾಲೂಕು ಕಛೇರಿಯಿಂದ ಕೈಕಂಬದವರೆಗೆ “ಡ್ರಗ್ಸ್ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಕಾಲ್ನಡಿಗೆ ಮತ್ತು ಮ್ಯಾರಾಥಾನ್- 2024” ಕಾರ್ಯಕ್ರಮ ಭಾನುವಾರ ನಡೆಯಿತು. 

ಜಿಲ್ಲಾ ಎಸ್ಪಿ ರಿಷ್ಯಂತ್ ಸಿ ಬಿ ಕಾರ್ಯಕ್ರಮ ಉದ್ಘಾಟಿಸಿದರು. ಎಡಿಶನಲ್ ಎಸ್ಪಿ ಧರ್ಮಪ್ಪ ಎನ್ ಎಂ, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್ ಸಹಿತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ತಾಲೂಕು ಕಛೇರಿಯ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಅಧ್ಯಾಪಕರುಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಜಿಲ್ಲಾ ಪೊಲೀಸ್ ಇಲಾಖೆ ಆಶ್ರಯದಲ್ಲಿ ಬಿ.ಸಿ.ರೋಡಿನಲ್ಲಿ ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಕಾಲ್ಮಡಿಗೆ ಹಾಗೂ ಮ್ಯಾರಥಾನ್ ಕಾರ್ಯಕ್ರಮ Rating: 5 Reviewed By: karavali Times
Scroll to Top