ಬಂಟ್ವಾಳ, ಜನವರಿ 13, 2024 (ಕರಾವಳಿ ಟೈಮ್ಸ್) : ಬಿ ಮೂಡ ಗ್ರಾಮದ ಬಿ ಸಿ ರೋಡು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಹಣ ಪಣಕ್ಕಿಟ್ಟು ವಾಹನಗಳ ನೋಂದಣಿ ಅಂಕೆ-ಸಂಖ್ಯೆಗಳ ಆಧಾರದಲ್ಲಿ ಮಟ್ಕಾ ಚೀಟಿ ಬರೆದು ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಪ್ರಕರಣ ಪತ್ತೆ ಹಚ್ಚಿದ ಬಂಟ್ವಾಳ ನಗರ ಠಾಣಾ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕು ನಾವೂರು ಗ್ರಾಮದ ನಿವಾಸಿ ಪುರುಷೋತ್ತಮ (29) ಎಂದು ಹೆಸರಿಸಲಾಗಿದೆ. ಬಂಧಿತ ಆರೋಪಿಯಿಂದ 2130/- ರೂಪಾಯಿ ನಗದು ಹಣ ಸಹಿತ ಕೃತ್ಕಕ್ಕೆ ಬಳಸಿದ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment