ಬಂಟ್ವಾಳ ತಾಲೂಕು ಆಡಳಿತ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ
ಬಂಟ್ವಾಳ, ಜನವರಿ 25, 2024 (ಕರಾವಳಿ ಟೈಮ್ಸ್) : ಮಾನ್ಯ ಚುನಾವಣಾ ಆಯೋಗವು ಕಾಲಕಾಲಕ್ಕೆ ಹೊರಡಿಸುವ ನಿರ್ದೇಶನಗಳಿಗೆ ಅನುಸಾರವಾಗಿ ಪಾರದರ್ಶಕವಾಗಿ ಚುನಾವಣೆಗಳನ್ನು ನಡೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಚುನಾವಣೆಯು ಒಂದು ಹಕ್ಕು ಮಾತ್ರವಲ್ಲ, ಎಲ್ಲಾ ಪ್ರಜ್ಞಾವಂತ ನಾಗರಿಕರ ಆದ್ಯ ಕರ್ತವ್ಯ ಸಹ ಆಗಿದೆ ಎಂದು ಬಂಟ್ವಾಳ ತಾಲೂಕು ತಹಶೀಲ್ದಾರ್ ಎಸ್ ಬಿ ಕೂಡಲಗಿ ಹೇಳಿದರು.
ಕೇಂದ್ರ ಚುನಾವಣಾ ಆಯೋಗದ ಸಂಸ್ಥಾಪನಾ ದಿನದ ಅಂಗವಾಗಿ ಗುರುವಾರ ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ಬಿ ಸಿ ರೋಡು ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ವೇಳೆ ಉತ್ತಮವಾಗಿ ಕಾರ್ಯನಿರ್ವಹಿಸಿದ ಬೂತು ಮಟ್ಟದ ಅಧಿಕಾರಿಗಳಿಗೆ ಹಾಗೂ ಬಿ ಎಲ್ ಒ ಮೇಲ್ವಿಚಾರಕರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು. ಮತದಾರರ ದಿನದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಉಪ ತಹಶೀಲ್ದಾರ್ ದಿವಾಕರ ಮುಗುಲ್ಯ, ಚುನಾವಣಾ ಶಾಖೆಯ ವಿಷಯ ನಿರ್ವಾಹಕ ಮಂಜುನಾಥ್ ಕೆ ಎಚ್, ಗ್ರಾಮ ಆಡಳಿತಾಧಿಕಾರಿ ಶ್ರೀಕಲಾ ಕಾರಂತ್, ಆಪರೇಟರ್ ಕಿರಣ್ ನರಿಕೊಂಬು, ಕಂದಾಯ ಇಲಾಖೆಯ ಸಿಬ್ಬಂದಿಗಳು, ಗ್ರಾಮಾಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು, ಬೂತ್ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಚುನಾವಣಾ ಶಾಖೆಯ ಉಪತಹಶೀಲ್ದಾರ್ ನವೀನ್ ಬೆಂಜನಪದವು ಸ್ವಾಗತಿಸಿ, ಪ್ರಸ್ತಾವನೆಗೈದರು. ಉಪ ತಹಶೀಲ್ದಾರ್ ನರೇಂದ್ರನಾಥ ಮಿತ್ತೂರು ವಂದಿಸಿದರು.
0 comments:
Post a Comment