ಮಂಗಳೂರು, ಜನವರಿ 16, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಒಳಪಟ್ಟ ಪುತ್ತೂರು ಹಾಗೂ ಧರ್ಮಸ್ಥಳ ಠಾಣೆಗಳ ವ್ಯಾಪ್ತಿಯಲ್ಲಿ ಅಶಾಂತಿ ಸೃಷ್ಟಿಸುವ ಎರಡು ಪ್ರಕರಣಗಳು ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಸಾರವಾಗಿರುವ ಬಗ್ಗೆ ಜಿಲ್ಲಾ ಎಸ್ಪಿ ರಿಷ್ಯಂತ್ ಸಿ ಬಿ ಅವರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದು, ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಹಾಗೂ ಜಿಲ್ಲೆಯಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿದಂತೆ ಈಗಾಗಲೇ ಕಟ್ಟುನಿಟ್ಟಾದ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.
ಪುತ್ತೂರಿನಲ್ಲಿ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಅಕ್ಕಪಕ್ಕದ ಮನೆ ಮಂದಿಯ ನಡುವೆ ನಡೆದ ಜಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ “ರಾಮ ಮಂದಿರದ ಮಂತ್ರಾಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದ ಬೆಂಬಲಿಗರಿಂದ ಹಲ್ಲೆ” ಎಂಬುದಾಗಿ ಸುದ್ದಿ ಹರಡಿದ್ದಾರೆ. ಆದರೆ ವಾಸ್ತವವಾಗಿ ಪುತ್ತೂರು ತಾಲೂಕು ಮುಂಡೂರು ಗ್ರಾಮದ ಬರೆಕೊಲಾಡಿ ಎಂಬಲ್ಲಿ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಅಕ್ಕಪಕ್ಕದ ಮನೆಯವರು ಜಗಳವಾಡಿಕೊಂಡು ಪರಸ್ಪರ ಹಲ್ಲೆ ನಡೆಸಿರುವುದಾಗಿದೆ. ಈ ಬಗ್ಗೆ ಈಗಾಗಲೇ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಕ್ರಮಾಂಕ 07/2024 (ಕಲಂ 341, 447, 323, 324, 506 ಜೊತೆಗೆ 34 ಐಪಿಸಿ) ಹಾಗೂ ಅಪರಾಧ ಕ್ರಮಾಂಕ 08/2024 ಕಲಂ ಐಪಿಸಿ 1860 323, 324, 504, 506 ಜೊತೆಗೆ 34 ರಂತೆ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ಎರಡೂ ಪ್ರಕರಣಗಳ ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ಸ್ಪಷ್ಟನೆ ನೀಡಿದ್ದಾರೆ.
ಇದೇ ಪ್ರಕಾರ “ಧರ್ಮಸ್ಥಳದಲ್ಲಿ ಅನ್ಯಕೋಮಿನ ಜೋಡಿಯನ್ನು ಹಿಡಿದು ಪೆÇಲೀಸರಿಗೊಪ್ಪಿಸಿದ ಸ್ಥಳೀಯರು” ಎಂಬ ಸುದ್ದಿ ಸಾಮಾಜಿಕ ತಾಣಗಳಲ್ಲಿ ಪ್ರಸಾರವಾಗುತ್ತಿದ್ದು, ಮಂಗಳವಾರ ಧರ್ಮಸ್ಥಳ ದೇವಸ್ಥಾನದ ವಠಾರದಲ್ಲಿ ಭಿನ್ನ ಕೋಮಿಗೆ ಸೇರಿದ ಹುಡುಗ ಹಾಗೂ ಹುಡುಗಿ ತಿರುಗಾಡುತ್ತಿದ್ದಾಗ, ಯಾವುದೇ ಅಹಿತಕರ ಘಟಣೆ ನಡೆಯದಂತೆ ಮುಂಜಾಗರೂಕತೆಗಾಗಿ ಸ್ಥಳೀಯ ಅಟೋ ರಿಕ್ಷಾ ಚಾಲಕರು ಈ ಬಗ್ಗೆ ಧರ್ಮಸ್ಥಳ ಠಾಣಾ ಪೆÇಲೀಸರಿಗೆ ಮಾಹಿತಿ ನೀಡಿರುತ್ತಾರೆ. ತಕ್ಷಣ ಸ್ಥಳಕ್ಕೆ ಬಂದ ಧರ್ಮಸ್ಥಳ ಠಾಣಾ ಪೆÇಲೀಸರು ಅವರನ್ನು ಠಾಣೆಗೆ ಕರೆಸಿ ವಿಚಾರಿಸಲಾಗಿ ಇಬ್ಬರೂ ಪ್ರಾಪ್ತ ವಯಸ್ಕರಾಗಿದ್ದು, ಅವರುಗಳಿಗೆ ಯಾವುದೇ ಹಲ್ಲೆ ನಡೆದಿಲ್ಲ ಎಂಬುದನ್ನು ಖಾತರಿಪಡಿಸಿದ ಬಳಿಕ, ಅವರುಗಳನ್ನು ಊರಿಗೆ ಕಳುಹಿಸಿಕೊಡಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕರು ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಹಾಗೂ ಸುಳ್ಳುಸುದ್ದಿಗಳನ್ನು ಪ್ರಸಾರ ಮಾಡದಂತೆ ಜಿಲ್ಲಾ ಎಸ್ಪಿ ಅವರು ಸಾರ್ವಜ£ಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
0 comments:
Post a Comment