ಬಂಟ್ವಾಳ, ಜನವರಿ 20, 2024 (ಕರಾವಳಿ ಟೈಮ್ಸ್) : ಬೈಕುಗಳ ನಡುವೆ ನಡೆದ ಅಪಘಾತದಲ್ಲಿ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸಜಿಪನಡು ಹಳೇ ಶಾಲಾ ರಸ್ತೆಯಲ್ಲಿ ಶನಿವಾರ ಸಂಭವಿಸಿದೆ.
ಗಾಯಾಳು ಬೈಕ್ ಸವಾರರನ್ನು ಸಜಿಪನಡು ನಿವಾಸಿ ಮುಫೀದ್ (20) ಹಾಗೂ ಅಫೀಲ್ ಎಂದು ಹೆಸರಿಸಲಾಗಿದೆ.
ಮುಫೀದ್ ತನ್ನ ಸ್ನೇಹಿತನ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಅಫೀಲ್ ಎಂಬಾತ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಫಘಾತದಿಂದ ಇಬ್ಬರು ಸವಾರರಿಗೂ ಗಾಯಗಳಾಗಿದ್ದು ಅವರನ್ನು ದೇರಳಕಟ್ಟೆ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ಸಾಗಿಸಲಾಗಿದೆ.
ಆಫೀಲ್ ಎಂಬಾತನ ದುಡುಕುತನ ಹಾಗೂ ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಮುಫೀದ್ ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment