ಬಂಟ್ವಾಳ, ಜನವರಿ 18, 2024 (ಕರಾವಳಿ ಟೈಮ್ಸ್) : ಪಿಕಪ್ ವಾಹನ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ತುಂಬೆ ಗ್ರಾಮದ ತುಂಬೆ ಜಂಕ್ಷನ್ ಬಳಿ ಬುಧವಾರ ಸಂಭವಿಸಿದೆ.
ಜಕ್ರಿಬೆಟ್ಟು ನಿವಾಸಿ ಮೆಲ್ವಿನ್ ಲೋಬೋ (56) ಅವರು ತನ್ನ ಸ್ಕೂಟರಿನಲ್ಲಿ ತೆರಳುತ್ತಿದ್ದ ವೇಳೆ ತುಂಬೆ ಜಂಕ್ಷನ್ ಬಳಿ ಜೈನುದ್ದೀನ್ ಎಂಬವರು ಚಲಾಯಿಸುತ್ತಿದ್ದ ಪಿಕಪ್ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸಮೇತ ರಸ್ತೆಗೆಸೆಯಲ್ಪಟ್ಟ ಮೆಲ್ವಿನ್ ಅವರು ಗಾಯಗೊಂಡಿದ್ದಾರೆ. ಗಾಯಾಳು ಮೆಲ್ವಿನ್ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment