ಪುತ್ತೂರು, ಜನವರಿ 20, 2024 (ಕರಾವಳಿ ಟೈಮ್ಸ್) : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಕ್ರಮಾಂಕ 40/2012 ಕಲಂ 326, 120 (ಬಿ), 307 ಆರ್/ಡಬ್ಲ್ಯು 34 ಐಪಿಸಿ ಪ್ರಕರಣದ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಚಿಕ್ಕಮುಡ್ನೂರು ಗ್ರಾಮದ ನಿವಾಸಿ ಮೋಹನ್ ಕುಮಾರ್ ಹೆಗ್ಡೆ ಅಲಿಯಾಸ್ ಮೋಹನ್ (38) ಎಂಬಾತನನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ರವಿ ಬಿ ಎಸ್ ಹಾಗೂ ಪಿಎಸ್ಸೈ ಜಂಬೂರಾಜ್ ಮಹಾಜನ್ ಅವರ ಮಾರ್ಗದರ್ಶನದಲ್ಲಿ, ಸಿಬ್ಬಂದಿಗಳಾದ ಮಧು ಕೆ ಎನ್, ಹಕ್ಕಿಮ್ ಅವರುಗಳು ಪುತ್ತೂರಿನಲ್ಲಿ ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
20 January 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment