ಕಡಬ, ಜನವರಿ 17, 2024 (ಕರಾವಳಿ ಟೈಮ್ಸ್) : ಪಿಕಪ್ ವಾಹನದಲ್ಲಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣ ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ಪರಾರಿಯಾಗಲೆತ್ನಿಸಿದ ಆರೋಪಿ ಪಿಕಪ್ ಚಾಲಕನನ್ನು ಬಂಧಿಸಿದ ಘಟನೆ ಕಡಬ ತಾಲೂಕು ಇಚಿಲಂಪಾಡಿ ಗ್ರಾಮದ ಪೆರಿಯ ಶಾಂತಿ ಎಂಬಲ್ಲಿ ಮಂಗಳವಾರ ಸಂಜೆ ವೇಳೆ ನಡೆದಿದೆ.
ಬಂಧಿತ ಆರೋಪಿ ಪಿಕಪ್ ಚಾಲಕನನ್ನು ಕಡಬ ತಾಲೂಕು ನೆಲ್ಯಾಡಿ ನಿವಾಸಿ ಸಿಬು ಜಾನ್ (41) ಎಂದು ಹೆಸರಿಸಲಾಗಿದೆ. ಉಪ್ಪಿನಂಗಡಿ ಪೆÇಲೀಸ್ ಠಾಣಾ ಪಿಎಸ್ಸೈ ರಾಜೇಶ ಕೆ ವಿ ನೇತೃತ್ವದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತ ಆರೋಪಿ ಜೊತೆ ಪಿಕಪ್ ವಾಹನ ಹಾಗೂ ಮರಳನ್ನು ಪೊಲೀಸರು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 10/2024 ಕಲಂ 379 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment