ಬಂಟ್ವಾಳ, ಫೆಬ್ರವರಿ 26, 2024 (ಕರಾವಳಿ ಟೈಮ್ಸ್) : ಅಟೋ ರಿಕ್ಷಾಗಳ ಮುಖಾಮುಖಿ ಅಪಘಾತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟು ಇತರ ಕೆಲವರು ಗಾಯಗೊಂಡು ವಿವಿಧ ಆಸ್ಪತ್ರೆಗಳಿಗೆ ದಾಖಲಾದ ಘಟನೆ ಅಳಿಕೆ ಗ್ರಾಮದ ಪಡಿಬಾಗಿಲು ಎಂಬಲ್ಲಿ ಭಾನುವಾರ ಸಂಭವಿಸಿದೆ.
ಮೃತ ಪ್ರಯಾಣಿಕನನ್ನು ಅಮ್ಮು ಮೂಲ್ಯ ಎಂದು ಹೆಸರಿಲಾಗಿದೆ. ಈ ಬಗ್ಗೆ ಅಳಿಕೆ ಗ್ರಾಮದ ನಿವಾಸಿ ಶ್ರೀಮತಿ ಶರ್ಮಿಳ (39) ಅವರು ಪೊಲೀಸರಿಗೆ ದೂರು ನೀಡಿದ್ದು, ಇವರು ತನ್ನ ಮಗಳೊಂದಿಗೆ ಹಮೀದ್ ಎಂಬವರ ಅಟೋ ರಿಕ್ಷಾದಲ್ಲಿ ಇತರ ಪ್ರಯಾಣಿಕರೊಂದಿಗೆ ವಿಟ್ಲ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಅಳಿಕೆ ಗ್ರಾಮದ ಪಡಿಬಾಗಿಲು ಎಂಬಲ್ಲಿ ಎದುರಿನಿಂದ ರವಿಕುಮಾರ್ ಎಂಬವರು ಚಲಾಯಿಸಿಕೊಂಡು ಬಂದ ಅಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಅಟೋ ರಿಕ್ಷಾ ಮಗುಚಿ ಬಿದ್ದಿದೆ. ತಕ್ಷಣ ಸ್ಥಳೀಯರು ಚಾಲಕ ಸಹಿತ ಪ್ರಯಾಣಿಕರನ್ನು ಹೊರತೆಗೆದು ಬೇರೆ ಬೇರೆ ವಾಹನಗಳಲ್ಲಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿದ್ದು, ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ಕಳುಹಿಸಿಕೊಟ್ಟಿದ್ದು, ಗಾಯಾಳುಗಳ ಪೈಕಿ ಅಮ್ಮು ಮೂಲ್ಯ ಅವರು ತೀವ್ರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment