ಹಿಂದಿನ ಸರಕಾರ ಬಾಕಿ ಉಳಿಸಿಕೊಂಡಿರುವ ರೇಶನ್ ಕಾರ್ಡ್ ಗಳನ್ನು ಎಪ್ರಿಲ್ 1 ರಿಂದ ವಿತರಣೆ, ಬಳಿಕ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಕ್ರಮ : ಆಹಾರ ಸಚಿವ ಮುನಿಯಪ್ಪ ಭರವಸೆ - Karavali Times ಹಿಂದಿನ ಸರಕಾರ ಬಾಕಿ ಉಳಿಸಿಕೊಂಡಿರುವ ರೇಶನ್ ಕಾರ್ಡ್ ಗಳನ್ನು ಎಪ್ರಿಲ್ 1 ರಿಂದ ವಿತರಣೆ, ಬಳಿಕ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಕ್ರಮ : ಆಹಾರ ಸಚಿವ ಮುನಿಯಪ್ಪ ಭರವಸೆ - Karavali Times

728x90

15 February 2024

ಹಿಂದಿನ ಸರಕಾರ ಬಾಕಿ ಉಳಿಸಿಕೊಂಡಿರುವ ರೇಶನ್ ಕಾರ್ಡ್ ಗಳನ್ನು ಎಪ್ರಿಲ್ 1 ರಿಂದ ವಿತರಣೆ, ಬಳಿಕ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಕ್ರಮ : ಆಹಾರ ಸಚಿವ ಮುನಿಯಪ್ಪ ಭರವಸೆ

ಬೆಂಗಳೂರು, ಫೆಬ್ರವರಿ 15, 2024 (ಕರಾವಳಿ ಟೈಮ್ಸ್) : ವಿಧಾಸಭೆ ಚುನಾವಣೆ ಬಂತು ಎಂದು ಹಿಂದಿನ ಸರಕಾರ 2.95 ಲಕ್ಷ ಪಡಿತರ ಚೀಟಿಗಳನ್ನು ವಿತರಿಸದೆ ಬಾಕಿ ಉಳಿಸಿಕೊಂಡಿತ್ತು. ಆದರೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಆರೋಗ್ಯ ಚಿಕಿತ್ಸೆಗಾಗಿ ಅರ್ಜಿ ಸಲ್ಲಿಸಿದವರಿಗೆ ತಕ್ಷಣ ಕಾರ್ಡ್ ವಿತರಿಸಲು ಸೂಚಿಸಲಾಗಿದೆ. ಆರೋಗ್ಯ ತುರ್ತು ಕಾರಣಕ್ಕೆ 744 ಜನರಿಗೆ ಬಿಪಿಎಲ್ ಕಾರ್ಡ್ ಕೊಟ್ಟಿದ್ದೇವೆ. ಮುಂದಿನ ಮಾರ್ಚ್ 31 ರೊಳಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಎಪ್ರಿಲ್ 1 ರಿಂದ ಕಾರ್ಡ್‍ಗಳನ್ನು ವಿತರಿಸುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಆದೇಶವನ್ನೂ ಹೊರಡಿಸಲಾಗಿದೆ. ಈ ಕೆಲಸ ಮುಗಿದ ನಂತರ ಹೊಸ ಬಿಪಿಎಲ್ ಕಾರ್ಡ್‍ಗಳನ್ನು ವಿತರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ರಾಜ್ಯ ಆಹಾರ ಸಚಿವ ಕೆ ಎಚ್ ಮುನಿಯಪ್ಪ ಭರವಸೆ ನೀಡಿದ್ದಾರೆ. 

ವಿಧಾನಸಭೆಯ ಕಲಾಪದಲ್ಲಿಂದು ಪ್ರಶ್ನೋತ್ತರ ವೇಳೆ ಶಾಸಕಿ ನಯನಾ ಮೋಟಮ್ಮ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಈ ಭರವಸೆ ನೀಡಿದ್ದಾರೆ. 

ಸದನದಲ್ಲಿ ಮಾತನಾಡಿದ ಶಾಸಕಿ ನಯನ ಮೋಟಮ್ಮ, ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ಸಮಸ್ಯೆಯಾಗುತ್ತಿದೆ. ಹಲವರ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆ ಜೊತೆ ಲಿಂಕ್ ಆಗಿಲ್ಲ. ಇದರಿಂದ ಐದು ಕೆಜಿಯ ಅಕ್ಕಿಯ ಹಣ ಹಲವು ಫಲಾನುಭವಿಗಳಿಗೆ ಕೆಲವು ತಿಂಗಳಿಂದ ತಲುಪುತ್ತಿಲ್ಲ. ಈ ಹಣ ಇಂತಹ ಫಲಾನುಭವಿಗಳಿಗೆ ಕೊಡುತ್ತಿದ್ದೀರಾ? ಇಲ್ಲವೇ ಎಂದು ಪ್ರಶ್ನಿಸಿದರು. 

ಇದಕ್ಕೆ ಧ್ವನಿಗೂಡಿಸಿದ ವಿಪಕ್ಷ ನಾಯಕ ಆರ್ ಅಶೋಕ್, ಬಿಪಿಎಲ್ ಕಾರ್ಡ್ ಕೊಡುವುದನ್ನು ರಾಜ್ಯ ಸರಕಾರ ನಿಲ್ಲಿಸಿದೆ. ಸರ್ವರ್ ಡೌನ್ ಅದೂ ಇದೂ ಸಮಸ್ಯೆ ಅಂತ ಹೇಳುತ್ತಿದ್ದೀರಿ. ಐದು ಗ್ಯಾರಂಟಿಗಳಿಗೆ ಜನರ ಸಂಖ್ಯೆ ಹೆಚ್ಚಾಗಬಾರದು ಅಂತ ಬಿಪಿಎಲ್ ಕಾರ್ಡ್ ಕೊಡುತ್ತಿಲ್ವಾ? ಇದುವರೆಗೆ ಎಷ್ಟು ಬಿಪಿಎಲ್ ಕೊಟ್ಟಿದ್ದೀರಿ ತಿಳಿಸಿ ಎಂದು ಪ್ರಶ್ನಿಸಿದರು. ಈ ಎಲ್ಲ ಪ್ರಶ್ನೆಗೆ ಸಂಬಂಧಿಸಿದಂತೆ ಸಚಿವ ಕೆ ಎಚ್ ಮುನಿಯಪ್ಪ ಅವರು ಮೇಲಿನ ಭರವಸೆ ನೀಡಿದರು. 

  • Blogger Comments
  • Facebook Comments

0 comments:

Post a Comment

Item Reviewed: ಹಿಂದಿನ ಸರಕಾರ ಬಾಕಿ ಉಳಿಸಿಕೊಂಡಿರುವ ರೇಶನ್ ಕಾರ್ಡ್ ಗಳನ್ನು ಎಪ್ರಿಲ್ 1 ರಿಂದ ವಿತರಣೆ, ಬಳಿಕ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಕ್ರಮ : ಆಹಾರ ಸಚಿವ ಮುನಿಯಪ್ಪ ಭರವಸೆ Rating: 5 Reviewed By: karavali Times
Scroll to Top