ಬಂಟ್ವಾಳ, ಫೆಬ್ರವರಿ 13, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕುಗಳ ಸುರಕ್ಷತೆಗೆ ಸಂಬಂಧಿಸಿದಂತೆ ಜಿಲ್ಲಾ ಎಸ್ಪಿ ಅವರ ನೇತೃತ್ವದಲ್ಲಿ ಎಲ್ಲಾ ಬ್ಯಾಂಕ್ ಮುಖ್ಯಸ್ಥರ ಸಭೆ ಮಂಗಳವಾರ ಬಿ ಸಿ ರೋಡಿನ ಲಯನ್ಸ್ ಸೇವಾ ಭವನದಲ್ಲಿ ನಡೆಯಿತು.
ಸಭೆಯಲ್ಲಿ ಬ್ಯಾಂಕುಗಳ ಸುರಕ್ಷತೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಯಿತು. ಅಲ್ಲದೆ ಸಭೆಯಲ್ಲಿ ನೀಡಲಾಗಿರುವ ಸೂಚನೆಗಳನ್ನು ಮುಂದಿನ 20 ದಿನಗಳ ಒಳಗಾಗಿ ಬ್ಯಾಂಕುಗಳು ಅಳವಡಿಸಿಕೊಂಡಿರುವ ಬಗ್ಗೆ, ಆಯಾ ಠಾಣಾ ವ್ಯಾಪ್ತಿಯ ಪೆÇಲೀಸ್ ಠಾಣೆಗಳ ಠಾಣಾಧಿಕಾರಿಗಳು, ಖುದ್ದಾಗಿ ಪರಿಶೀಲಿಸುವಂತೆ ಇದೇ ವೇಳೆ ಎಸ್ಪಿ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಇತ್ತೀಚೆಗೆ ವಿಟ್ಲ ಸಮೀಪದ ಅಡ್ಯನಡ್ಕದ ಕರ್ನಾಟಕ ಬ್ಯಾಂಕಿನಲ್ಲಿ ನಡೆದ ದರೋಡೆ ಪ್ರಕರಣದ ಬಳಿಕ ಎಸ್ಪಿ ಅವರು ಈ ಕ್ರಮ ಕೈಗೊಂಡಿದ್ದಾರೆ.
0 comments:
Post a Comment