ಬೆಳ್ತಂಗಡಿ, ಫೆಬ್ರವರಿ 05, 2024 (ಕರಾವಳಿ ಟೈಮ್ಸ್) : ಬಸ್ಸು ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ನಡಾ ಗ್ರಾಮದ ಸಂಜೀವನ ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಮೃತ ದ್ವಿಚಕ್ರ ವಾಹನ ಸವಾರನನ್ನು ಧರಣೇಂದ್ರ ಎಂದು ಹೆಸರಿಸಲಾಗಿದೆ. ಧರಣೇಂದ್ರ ಅವರು ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ವಿರುದ್ದ ದಿಕ್ಕಿನಲ್ಲಿ ಬಂದ ಬಸ್ಸು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ಧರನೇಂದ್ರ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಲಾಯಿತಾದರೂ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ. ಬಸ್ಸು ಚಾಲಕ ಮೋಹನ ಗೌಡ ಅವರ ನಿರ್ಲಕ್ಷ್ಯದ ಚಾಲನೆಯೇ ಘಟನೆಗೆ ಕಾರಣ ಎಂದು ನಡಾ ನಿವಾಸಿ ಲೋಹಿತಾಶ್ವ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment