ಮಂಗಳೂರು, ಫೆಬ್ರವರಿ 10, 2024 (ಕರಾವಳಿ ಟೈಮ್ಸ್) : ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಫೆ 17 ರಂದು ನಡೆಯುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಮಾವೇಶದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ನಿರ್ವಹಣಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಐವನ್ ಡಿಸೋಜ ಅಧ್ಯಕ್ಷತೆಯಲ್ಲಿ ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸಮಿತಿಯ ಸಭೆ ನಡೆಯಿತು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಮಾವೇಶದ ಬಗ್ಗೆ ವಿವಿಧ ಮಾಧ್ಯಮಗಳ ಮೂಲಕ ಪ್ರಚಾರ ನಡೆಸುವ ಸಲುವಾಗಿ ರೂಪುರೇಷಗಳನ್ನು ಸಭೆಯಲ್ಲಿ ಸಿದ್ಧಪಡಿಸಲಾಯಿತು.
ಈ ಸಂದರ್ಭ ಸಮಿತಿ ಸಂಚಾಲಕ ಪಿ.ವಿ. ಮೋಹನ್, ಸಮಿತಿ ಸದಸ್ಯರಾದ ಸದಾಶಿವ್ ಉಳ್ಳಾಲ್, ಹೇಮನಾಥ ಶೆಟ್ಟಿ ಕಾವು, ಎ.ಸಿ. ವಿನಯರಾಜ್, ಎಸ್. ಅಪ್ಪಿ, ಯು.ಟಿ. ಫರ್ಝಾನ, ಪೂರ್ಣೇಶ್ ಭಂಡಾರಿ, ನಿತ್ಯಾನಂದ ಶೆಟ್ಟಿ, ನಝೀರ್ ಬಜಾಲ್ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment