ಮಂಗಳೂರು, ಫೆಬ್ರವರಿ 08, 2024 (ಕರಾವಳಿ ಟೈಮ್ಸ್) : ವಳಚ್ಚಿಲ್ ಪದವು ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲಿನಲ್ಲಿ ಫುಡ್ ಪಾಯಿಸನ್ ಆಗಿ ಹಲವು ಮಂದಿ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ವಳಚ್ಚಿಲ್ ವಿದ್ಯಾರ್ಥಿನಿಯರ ಹಾಸ್ಟೆಲಿನಲ್ಲಿ ಈ ಘಟನೆ ನಡೆದಿದೆ. ಆಹಾರ ಪದಾರ್ಥದಲ್ಲಿ ಅದ್ಯಾವುದೋ ಏರು ಪೇರು ಉಂಟಾಗಿದ್ದು, ಆಹಾರ ಸೇವಿಸಿದ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಬಳಿಕ ವಿದ್ಯಾರ್ಥಿನಿಯರನ್ನು ಅಂಬುಲೆನ್ಸ್ ಮೂಲಕ ತುಂಬೆ ಹಾಗೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
0 comments:
Post a Comment