ಬಂಟ್ವಾಳ, ಫೆಬ್ರವರಿ 09, 2024 (ಕರಾವಳಿ ಟೈಮ್ಸ್) : ಸರಕಾರಿ ನೌಕರರು ಜೀತ ಪದ್ಧತಿಯ ಬಗ್ಗೆ ಸದಾ ಜಾಗೃತರಾಗಿದ್ದು, ಸಾರ್ವಜನಿಕರಲ್ಲಿ ಅಧಿಕಾರಿಗಳು ಇದರ ಕುರಿತು ಅರಿವು ಮೂಡಿಸಬೇಕಿದೆ. ಜೀತ ಪದ್ಧತಿಯ ಸಂಪೂರ್ಣ ನಿರ್ಮೂಲನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಬಂಟ್ವಾಳ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಹೇಳಿದರು.
ಬಿ ಸಿ ರೋಡು ಮಿನಿ ವಿಧಾನಸೌಧ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜೀತ ಪದ್ಧತಿ ನಿರ್ಮೂಲನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇದೇ ವೇಳೆ ಜೀತ ಪದ್ಧತಿ ನಿರ್ಮೂಲನೆ ಕುರಿತು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಈ ಸಂದರ್ಭ ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ನರೇಂದ್ರನಾಥ ಮಿತ್ತೂರು, ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕರಾದ ಆರ್ ವಿಜಯ್, ಜನಾರ್ದನ್ ಜೆ, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಭಾಗವಹಿಸಿದ್ದರು.
0 comments:
Post a Comment