ಬಂಟ್ವಾಳ, ಫೆಬ್ರವರಿ 10, 2024 (ಕರಾವಳಿ ಟೈಮ್ಸ್) : ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವ್ಯಕ್ತಿಯೋರ್ವರು ರಿಕ್ಷಾದಿಂದ ಹೊರಕ್ಕೆಸೆಯಲ್ಪಟ್ಟು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಳ್ಳಿಗೆ ಗ್ರಾಮದ ಕೊರಗಜ್ಜನಕಟ್ಟೆ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಗಾಯಗೊಂಡ ವ್ಯಕ್ತಿಯನ್ನು ಕಳ್ಳಿಗೆ ಗ್ರಾಮದ ಬೆಂಜನಪದವು ನಿವಾಸಿ ಅಂಟೋನಿ ಪಿಂಟೋ (48) ಎಂದು ಹೆಸರಿಸಲಾಗಿದೆ. ಆಂಟೋನಿ ಪಿಂಟೋ ಅವರು ಶುಕ್ರವಾರ ಮಧ್ಯಾಹ್ನ ಪರಿಚಯದ ಆನಂದ ಎಂಬವರ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕೊರಗಜ್ಜನಕಟ್ಟೆ ಎಂಬಲ್ಲಿ ಅಟೋ ರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಅಟೋ ಚಾಲಕ ಆನಂದ ಅವರು ಆಸ್ಪತ್ರೆಗೆ ಸಾಗಿಸಿದ್ದಾರೆ.
ಈ ಬಗ್ಗೆ ಅಂಟೋನಿ ಪಿಂಟೋ ಅವರ ಪತ್ನಿ ಜ್ಯೋತಿ ಪಿಂಟೋ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment