ಸವಣಾಲು : ಕೋಳಿ ಅಂಕ ಜೂಜಾಟ ಅಡ್ಡೆಗೆ ಬೆಳ್ತಂಗಡಿ ಪೊಲೀಸರ ದಾಳಿ - Karavali Times ಸವಣಾಲು : ಕೋಳಿ ಅಂಕ ಜೂಜಾಟ ಅಡ್ಡೆಗೆ ಬೆಳ್ತಂಗಡಿ ಪೊಲೀಸರ ದಾಳಿ - Karavali Times

728x90

1 February 2024

ಸವಣಾಲು : ಕೋಳಿ ಅಂಕ ಜೂಜಾಟ ಅಡ್ಡೆಗೆ ಬೆಳ್ತಂಗಡಿ ಪೊಲೀಸರ ದಾಳಿ

ಬೆಳ್ತಂಗಡಿ, ಫೆಬ್ರವರಿ 02, 2024 (ಕರಾವಳಿ ಟೈಮ್ಸ್) : ತಾಲೂಕಿನ ಸವಣಾಲು ಗ್ರಾಮದ ಹಲಸಿನ ಕಟ್ಟೆ ಮಾರಿಗುಡಿಯ ಬಳಿ ನಡೆಯುತ್ತಿದ್ದ ಕೋಳಿ ಅಂಕ ಅಡ್ಡೆಗೆ ದಾಳಿ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪಿಎಸ್ಸೈ ಚಂದ್ರಶೇಖರ ಎ ಎಂ ಅವರ ನೇತೃತ್ವದಲ್ಲಿ ಪೊಲೀಸರು ಈ ದಾಳಿ ಸಂಘಟಿಸಿದ್ದು, ದಾಳಿ ವೇಳೆ ಕೃತ್ಯದಲ್ಲಿ ಭಾಗವಹಿಸಿದ್ದ ಆರೋಪಿಗಳು ಸ್ಥಳದಿಂದ ಪರಾರಿಯಾಗುವಲ್ಲಿ ಸಫಲರಾಗಿದ್ದಾರೆ. ಸ್ಥಳದಲ್ಲಿದ್ದ ಕೋಳಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸವಣಾಲು : ಕೋಳಿ ಅಂಕ ಜೂಜಾಟ ಅಡ್ಡೆಗೆ ಬೆಳ್ತಂಗಡಿ ಪೊಲೀಸರ ದಾಳಿ Rating: 5 Reviewed By: karavali Times
Scroll to Top