ಮಂಗಳೂರು, ಫೆಬ್ರವರಿ 16, 2024 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಅಭಿವೃದ್ಧಿ ಶಕೆಯೇ ಆರಂಭವಾಗಿದೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ಜನಸಾಮಾನ್ಯರು, ಮಧ್ಯಮ ವರ್ಗದವರ ಆರ್ಥಿಕತೆಗೆ ಚೈತನ್ಯ ನೀಡಿದ್ದು, ಸಿದ್ಧರಾಮಯ್ಯರು ಮಂಡಿಸಿದ ಈ ವರ್ಷದ ಬಜೆಟ್ ರಾಜ್ಯವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಕರಾವಳಿ ಜಿಲ್ಲೆಯ ಪ್ರಮುಖವಾಗಿರುವ ಮೀನುಗಾರಿಕಾ ಕ್ಷೇತ್ರಕ್ಕೆ 3 ಸಾವಿರ ಕೋಟಿ ರೂಪಾಯಿ ಮೊತ್ತದ ಯೋಜನೆ, ಸಮುದ್ರ ಅಂಬುಲೆನ್ಸ್, ಪುತ್ತೂರಿನಲ್ಲಿ ಪಶು ವೈದ್ಯಕೀಯ ಕಾಲೇಜು ನಿಜಕ್ಕೂ ಒಳ್ಳೆಯ ಯೋಜನೆಗಳು. ಈ ಮೂಲಕ ಸಿದ್ಧರಾಮಯ್ಯರು ಆರ್ಥಿಕ ವಲಯದ ಮಾಸ್ಟರ್ ಮೈಂಡ್ ಎನ್ನುವುದನ್ನು ಮತ್ತೆ ಸಾಬೀತು ಮಾಡಿದ್ದಾರೆ ಎಂದು ಕೊಂಡಾಡಿದ್ದಾರೆ.
0 comments:
Post a Comment